ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವಂತ ಇನ್ವೆಸ್ಟ್ ಕರ್ನಾಟಕ – 2025ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಿದ್ದಾರೆ.
ಅರಮನೆ ಮೈದಾನದಲ್ಲಿ ಆಯೋಜಿಸಿರುವ ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025” ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭೇಟಿಯಾಗಿ ಚರ್ಚಿಸಿದರು. ಆರೋಗ್ಯ ವಿಚಾರಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿ ರಾಜ್ಯ ಸಂಪುಟ ಸಹದ್ಯೋಗಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಮಾವೇಶ ಉದ್ಘಾಟನೆಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಕಾರ್ಯಕ್ರಮದಲ್ಲಿ ಜಾಗತಿಕ ಉದ್ಯಮಿಗಳು ಮತ್ತು ಜಾಗತಿಕ ಉದ್ಯಮ ಕ್ಷೇತ್ರವನ್ನು ಉದ್ದೇಶಿಸಿ ಮಾತನಾಡಿದರು.
ಪ್ಯಾರಿಸ್ ಒಪ್ಪಂದದ ಗುರಿಗಳನ್ನು ಸಾಧಿಸಿದ ಮೊದಲ ಜಿ20 ದೇಶ ಭಾರತ: ಪ್ರಧಾನಿ ನರೇಂದ್ರ ಮೋದಿ | PM Modi