ಚಿಕ್ಕಮಂಗಳೂರು : ಜಾತ್ರೆಗೆ ಎಂದು ಬೈಕ್ ನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಬಳಿ ಘಟನೆ ನಡೆದಿದೆ.
ಮೃತರನ್ನು ಬಗ್ಗಬಳ್ಳಿಯ ಸಂಜು (26) ಹಾಗೂ ಪ್ರದೀಪ್ (30) ಎಂದು ತಿಳಿದುಬಂದಿದೆ. ಇಬ್ಬರು ಬೈಕ್ ಮೇಲೆ ಅಂತರಘಟ್ಟಮ್ಮ ಜಾತ್ರೆಗೆ ತರುತ್ತಿದ್ದರು. ಈ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಗಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.