ಬೆಂಗಳೂರು : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು,, ವಸತಿ ಶಾಲೆ ತೆರೆಯಲು ಸರ್ಕಾರ ತೀರ್ಮಾನಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಲು, ಮೊರಾರ್ಜಿ ವಸತಿ ಶಾಲೆಯ ಮಾದರಿಯಲ್ಲಿಯೇ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ತೆರೆಯಲು ತೀರ್ಮಾನಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹೇಳಿದ್ದಾರೆ.
ಹಾಗೆಯೇ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ವಂತಿಕೆ ನೀಡುವ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಪ್ರಸಕ್ತ ಸಾಲಿನಲ್ಲಿ ಇದುವರೆಗೆ ವಿದ್ಯಾರ್ಥಿಗಳಿಗೆ 23 ಕೋಟಿ ರೂಪಾಯಿ ಪಾವತಿಸಲಾಗಿದೆ.2024 -25 ನೇ ಸಾಲಿನಲ್ಲಿ 32 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 25,000 ಮಕ್ಕಳಿಗೆ 23 ಕೋಟಿ ರೂಪಾಯಿ ಪ್ರೋತ್ಸಾಹಧನ ಪಾವತಿಸಲಾಗಿದೆ.