ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಚಾರದಿಂದ ಸಂಬಂಧಿಸಿದಂತೆ ಉದಯಗಿರಿ ಠಾಣೆ ಎದುರು ಸೋಮವಾರ ರಾತ್ರಿ ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಾಟದಿಂದ ಉದ್ವಿಗ್ನಗೊಂಡಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸರದ್ದು ಯಾವ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಮಾಹಿತಿ ಪಡೆದಿದ್ದೇನೆ ಪೊಲೀಸರು ಅನಾಹುತ ತಪ್ಪಿಸಿದ್ದಾರೆ.ಯಾರು ಏನು ಹೇಳಿದರೂ ಎಂಬುವುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ ಪೊಲೀಸರದ್ದು ಯಾವ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರು ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದರು.
ಇನ್ನು ಸಚಿವ ಕೆ ಎನ್ ರಾಜಣ್ಣ ಹೇಳಿರುವ ಮಾತಿಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸುತ್ತಾರೆ. ಸಿಎಂಗೆ ಸದ್ಯಕ್ಕೆ ಮಾತನಾಡಲು ಆಗುತ್ತಿಲ್ಲ. 8 ರಿಂದ 10 ದಿನದಲ್ಲಿ ಮುಖ್ಯಮಂತ್ರಿಗಳೇ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳುತ್ತಿದ್ದೇನೆ ಪೊಲೀಸರದ್ದು ಯಾವ ತಪ್ಪಿಲ್ಲ ಎಲ್ಲಾ ಮಾಹಿತಿ ಪಡೆದಿದ್ದೇನೆ. ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದು ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಇನ್ನು ಮೆಟ್ರೋ ದರ ಹೆಚ್ಚಳ ಕುರಿತು ಮೆಟ್ರೋ ದರ ಹೆಚ್ಚಳ ನಮಗೆ ಸಂಬಂಧಪಟ್ಟದ್ದಲ್ಲ. ಬಿಜೆಪಿ ಇದರಲ್ಲೂ ರಾಜಕಾರಣ ಮಾಡುತ್ತದೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತದೆ ಮೆಟ್ರೋ ದರ ಏರಿಕೆ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ.ಅದಕ್ಕಾಗಿ ನೇಮಿಸಿದ ಜಡ್ಜ್ ಈ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅವರು ತಿಳಿಸಿದರು.