ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಇಬ್ಬರು ವಾದ ಅಪಘಾತ ಸಂಭವಿಸಿದ್ದು ಕಾರು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಬಚಾವಾಗಿದ್ದಾರೆ.
ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕೆಂಗೇರಿ ಪಂಚಮುಖಿ ಗಣಪತಿ ದೇವಸ್ಥಾನದ ಬಳಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪರಾಗಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.