ಬೆಂಗಳೂರು: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿಯ ಸದಸ್ಯರನ್ನಾಗಿ ಹಿರಿಯ ರಂಗಕರ್ಮಿ, ಪತ್ರಕರ್ತ ವೈದ್ಯನಾಥ್ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅವರು, ಹಿರಿಯ ಪತ್ರಕರ್ತರು, ರಂಗಕರ್ಮಿಗಳು, ಚಲನಚಿತ್ರ ಸಂಘಟಕರು, ಕಲಾವಿದರು ಆದ ವೈದ್ಯನಾಥ್ ಅವರು ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿ ಸದಸ್ಯರಾಗಿ ನೇಮಕ ಗೊಂಡಿದ್ದಾರೆ ಎಂದಿದ್ದಾರೆ.
ಜೊತೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರನ್ನು ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ – ಶಿವಮೊಗ್ಗ ಚಿತ್ರಸಮಾಜದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ಅವರು ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ ಎಂದು ತಿಳಿಸಿದ್ದಾರೆ.