ಬೆಂಗಳೂರು : ಮೊಬೈಲ್ ಜಾಸ್ತಿ ಬಳಸಬೇಡ ಓದಿನ ಕಡೆ ಗಮನಕೊಡು ಎಂದಿದ್ದಕ್ಕೆ ನೊಂದ SSLC ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಅಪಾರ್ಮೆಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ.
ಬೆಂಗಳೂರಿನ ಕಾಡಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸೆಟ್ಸ್ ಮಾರ್ಕ್ ಅಪಾರ್ಮೆಟ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಈ ಒಂದು ಅಪಾರ್ಟ್ಮೆಂಟ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು. ಅವರ 15 ವರ್ಷದ ಬಾಲಕಿ ಅವಂತಿಕಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು.
ಅವಂತಿಕಾ ಹೆಚ್ಚು ಮೊಬೈಲ್ ಬಳಸುತ್ತಿದ್ದಳು, ಇದನ್ನು ಗಮನಿಸಿದ ತಾಯಿ ಜಾಸ್ತಿ ಮೊಬೈಲ್ ಬಳಸಬೇಡ ಓದಿನ ಕಡೆಗೆ ಗಮನ ಕೊಡು ಎಂದಿದ್ದರು ಅಷ್ಟೆ. ಅವಂತಿಕಾ ಅಪಾರ್ಮೆಂಟ್ ನ 20ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಸ್ಥಳಕ್ಕೆ ಕಾಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.