ಬೆಂಗಳೂರು : ಚಾಮರಾಜನಗರ ಜಿಲ್ಲಿಯ ಮಲೈಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದ್ದು, ಚಾಮರಾಜನಗರದ ಬದಲಾಗಿ ಬೆಂಗಳೂರಿನಲ್ಲಿಯೇ ಇದೆ ಫೆಬ್ರವರಿ 20 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಹೌದು ಕಳೆದ ಹಲವು ದಿನಗಳಿಂದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ದಿನಾಂಕಗಳನ್ನು ಮುಂದೂಡತ್ತಲೇ ಬಂದಿತ್ತು. ಈಗ ಸಿಎಂ ಸಿದ್ದರಾಮಯ್ಯ ಅವರ ಮಂಡಿ ನೋವು ಹಿನ್ನಲೆಯಲ್ಲಿ ಇದೀಗ ಫೆಬ್ರವರಿ 20ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.