ಉತ್ತರಕನ್ನಡ : ಹಾಲಕ್ಕಿ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದ ಹಾಗೂ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧಾನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿಯ ತಮ್ಮ ನಿವಾಸದಲ್ಲಿ ಸುಕ್ರಿ ಬೊಮ್ಮಗೌಡ (88) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ.
ಹೌದು ವಯೊಸಹಜ ಕಾಯಿಲೆಯಿಂದ ಬಡಿಗೇರಿ ನಿವಾಸದಲ್ಲಿ ಸುಕ್ರಿ ಬೊಮ್ಮಗೌಡ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿ ಗ್ರಾಮದಲ್ಲಿ ಅವರು ನಿಧನರಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಹಾಲಕ್ಕಿ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದರು 2017ರಲ್ಲಿ ಸುಕ್ರಿ ಬೊಮ್ಮು ಗೌಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
ಸುಕ್ರಿ ಬೊಮ್ಮಗೌಡ ಹಿನ್ನೆಲೆ?
ಸುಕ್ರಿ ಬೊಮ್ಮಗೌಡ ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿ ಎಂಬಲ್ಲಿನವರು. ಅವರು ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದವರು. ಸಾಂಪ್ರದಾಯಿಕ ಬುಡಕಟ್ಟು ಸಂಗೀತ ಕ್ಷೇತ್ರದಲ್ಲಿನ ಅವರ ಕೆಲಸಗಳಿಗೆ ಪದ್ಮಶ್ರೀ ಸಹಿತ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಲಭಿಸಿದೆ. ಅವರು ತಮ್ಮ ಸಮುದಾಯದ ಇತರರಿಗೆ ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿ ಕೊಡುತ್ತಾರೆ. ಆ ಮೂಲಕ ಅದರ ಉಳಿವಿಗೆ ಶ್ರಮಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದು ಮತ್ತು ಹಾಲಕ್ಕಿ ಕೋಗಿಲೆ/ ಜನಪದ ಕೋಗಿಲೆ ಎಂದೂ ಕರೆಯಲ್ಪಟ್ಟಿದ್ದಾರೆ.