ಮೈಸೂರು : ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಮೂರು ದಿನಗಳ ಬಳಿಕ ಇಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಅವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದ ಮರುದಿನವೇ ಆರ್ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ಮೂರು ದಿನಗಳ ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ರವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆಗೆ ಇಂದು ಡಾ.ಜಿ ಪರಮೇಶ್ವರ್ ಸಭೆ ನಡೆಸಲಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 15 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅದರಲ್ಲಿ ಓರ್ವ ಬಾಲಕ ಕೂಡ ಇದ್ದಾನೆ. ಈಗಾಗಲೇ ಎಲ್ಲಾ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು, ಓರ್ವ ಬಾಲಾಪರಾಧಿಯನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.