ಕೊಪ್ಪಳ : ರಾಜ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ ಈ ಒಂದು ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ನಡೆದಿದೆ.
ಹೌದು ವಾಹನಗಳ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನಕ್ಕೆ ಬೆಂಕಿ ಬಿದ್ದು ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ತೊಡಕಿ ಗ್ರಾಮದ ಸಿದ್ದಪ್ಪ (23) ಮತ್ತು ಅಂಜಪ್ಪ (30) ಎಂದು ತಿಳಿದುಬಂದಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ತೊಡಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಕುಷ್ಟಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.