ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಡಿ.13 ರಂದು ವಿಧಾನಸೌಧದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಎಫ್ ಐ ಆರ್ ದಾಖಲಾದ 2 ತಿಂಗಳ ಬಳಿಕ ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಿಸಿತ್ತು. ಆದರೆ ಎಸ್ ಐಟಿ ಮುಖ್ಯಸ್ಥರಾಗಲು ಕೆಲ ಹಿರಿಯ ಐಪಿಎಸ್ ಅಧಿಕಾರಿ ಗಳು ಹಿಂದೇಟು ಹಾಕಿದ ಕಾರಣಕ್ಕೆ ಎಫ್‌ಐಆರ್‌ದಾಖಲಾದ 2 ತಿಂಗಳ ತರುವಾಯ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ ಎನ್ನಲಾಗಿದೆ.








