ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋಗೆ ಇಂದು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಕಿಮೀಗಟ್ಟಲೆ ಸಾಲುಗಟ್ಟಿ ನಿಂತಿದೆ.
ಹೌದು, ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಯಲಹಂಕದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಕಿಮೀಗಟ್ಟಲೇ ಸಾಲುಗಟ್ಟಿ ನಿಂತಿದೆ. ಈ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಿದ್ದು, ರ್ ಶೋ ಹಿನ್ನೆಲೆ ಯಲಹಂಕ ಫ್ಲೈ ಓವರ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ಪರದಾಟ ನಡೆಸಿದ್ದಾರೆ. ಸರ್ವೀಸ್ ರಸ್ತೆಯಲ್ಲೇ ವಾಹನ ಸವಾರರು ಸಿಲುಕಿಕೊಂಡಿದ್ದಾರೆ. ಜೊತೆಗೆ ಆಂಬ್ಯುಲೆನ್ಸ್ ಸಹ ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದೆ.