ಬೆಂಗಳೂರು : ಒಂದು ಕಡೆ ಕಾಂಗ್ರೆಸ್ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ಕುರಿತು ಸುಳಿವು ನೀಡಿದ್ದಾರೆ. ಇದೆ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಜನ ನನಗೆ ಇದೀಗ ರೆಸ್ಟ್ ಕೊಟ್ಟಿದ್ದಾರೆ. ಹಾಗಾಗಿ ನಾನು ಯಾವುದೇ ಆಕಾಂಕ್ಷಿ ಅಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಚಾರ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಜನರು ನನಗೆ ಸದ್ಯಕ್ಕೆ ರೆಸ್ಟ್ ಕೊಟ್ಟಿದ್ದಾರೆ. ಹಾಗಾಗಿ ರೆಸ್ಟ್ ನಲ್ಲಿದ್ದೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
ಮೆಟ್ರೋ ಟಿಕೆಟ್ ದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರಿಗೆ ಕೆಟ್ಟ ಹೆಸರು ತರುವ ಹುನ್ನಾರವು ಇದೆ ಮೆಟ್ರೋ ನಿರ್ವಹಣೆ ಕೇಂದ್ರ ಸರ್ಕಾರದ ಕೈಯಲ್ಲಿದೆ. ರಾಜ್ಯ ಸರ್ಕಾರ ಏನಾದರೂ ಇದ್ದರೆ ಪತ್ರ ಬರೆಯಬಹುದು ಮೆಟ್ರೋ ಬೋರ್ಡ್ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದೆ ಮೋದಿ ರೈಲ್ವೆ ಸಚಿವರ ಮುಂದೆ ಸಂಸದರು ಬೇಡಿಕೆ ಇಡಲಿ ಮೆಟ್ರೋ ಗೆ ಕೇಂದ್ರದ ಸಹಕಾರ ಹೆಚ್ಚಿಸಲಿ. ಮೆಟ್ರೋ ಸ್ಟೇಷನ್ ಮುಂದೆ ಡ್ರಾಮಾ ಮಾಡುವುದನ್ನು ಬಿಡಿ ಎಂದು ಬಿಜೆಪಿ ನಾಯಕರು ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು.