Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ `ಮಾಹಿತಿ ಹಕ್ಕು’ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ : ಸಚಿವ ಹೆಚ್.ಕೆ.ಪಾಟೀಲ್

13/08/2025 8:53 AM

ಬೆಂಗಳೂರಿಗರಿಗೆ ಶಾಕಿಂಗ್​ ನ್ಯೂಸ್​! ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕೈತಪ್ಪಿದ ಮಹಿಳಾ ವಿಶ್ವಕಪ್‌ ಆತಿಥ್ಯ | CHINNASWAMY STADIUM

13/08/2025 8:43 AM

BREAKING : ಬಾಗಲಕೋಟೆಯಲ್ಲಿ ಕರ್ತವ್ಯ ನಿರತ `ASI’ ಹೃದಯಾಘಾತದಿಂದ ಸಾವು.!

13/08/2025 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಹೂಡಿಕೆದಾರರ ಸಮಾವೇಶಕ್ಕೆ ಅದ್ಧೂರಿ ತೆರೆ: 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗಿ
KARNATAKA

ಕರ್ನಾಟಕ ಹೂಡಿಕೆದಾರರ ಸಮಾವೇಶಕ್ಕೆ ಅದ್ಧೂರಿ ತೆರೆ: 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗಿ

By kannadanewsnow0914/02/2025 5:37 PM

ಬೆಂಗಳೂರು: ಕಳೆದ ಮೂರು ದಿನಗಳಿಂದ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ `ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಶುಕ್ರವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ತೆರೆ ಬಿತ್ತು. 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು, ಕೈಗಾರಿಕಾ ಪರಿಣತರು ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಟ್ಟದ ನೀತಿ ನಿರೂಪಕರು ಸಕ್ರಿಯವಾಗಿ ಪಾಲ್ಗೊಂಡಿದ್ದ ಸಮಾವೇಶವು ಬಂಡವಾಳ ಹೂಡಿಕೆಗೆ ಕರ್ನಾಟಕವೇ ಪ್ರಶಸ್ತ ತಾಣ ಎನ್ನುವ ಸಂದೇಶ ತಲುಪಿಸುವಲ್ಲಿ ಯಶಸ್ವಿಯಾಯಿತು.

ಗಣ್ಯಾತಿಗಣ್ಯರು ಮತ್ತು ರಾಜ್ಯ ಸಚಿವ ಸಂಪುಟದ ಹತ್ತಾರು ಸಚಿವರು ಹಾಜರಿದ್ದ ಸಮಾರೋಪ ಸಮಾರಂಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರು 2025-30ರ ಅವಧಿಯವರೆಗಿನ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಬಿಡುಗಡೆಗೊಳಿಸಿದರು. ಜತೆಗೆ ಇದೇ ವೇದಿಕೆಯಲ್ಲಿ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕಾ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉದ್ಯಮ ಸಂಸ್ಥೆಗಳಿಗೆ `ವೆಂಚುರೈಸ್ ಚಾಲೆಂಜ್’ ಪುರಸ್ಕಾರಗಳನ್ನು ಪ್ರದಾನ ಮಾಡಲಾಯಿತು. ಇದಕ್ಕೂ ಮೊದಲು ಇದೇ ಪ್ರಥಮ ಬಾರಿಗೆ ಸಾಧಕ ಕಂಪನಿಗಳಿಗೆ `ಇನ್ವೆಸ್ಟ್ ಕರ್ನಾಟಕ’, ಎಸ್ಎಂಇ ಕನೆಕ್ಟ್, ವೆಂಚುರೈಸ್ ಚಾಲೆಂಜ್ ಪುರಸ್ಕಾರಗಳನ್ನು ಪ್ರದಾನ ಮಾಡಿದ್ದು, ಈ ಸಮಾವೇಶದ ವಿಶೇಷವಾಗಿತ್ತು.

ಸಚಿವ ಎಂ ಬಿ ಪಾಟೀಲ, `ಮೂರು ವರ್ಷಗಳ ನಂತರ ನಡೆದ ಹೂಡಿಕೆದಾರರ ಸಮಾವೇಶವು ಒಂದು ನಿರ್ಣಾಯಕ ಉದ್ದೇಶದೊಂದಿಗೆ ನಡೆದಿದೆ. ನಾವು ಕೈಗಾರಿಕಾ ಬೆಳವಣಿಗೆಯ ಸಾಂಪ್ರದಾಯಿಕ ಮಾದರಿಗಳಿಂದ ಹೊರಬಂದು, ಆಧುನಿಕ ತಂತ್ರಜ್ಞಾನಾಧಾರಿತ ಉದ್ಯಮಗಳನ್ನು ಬೆಳೆಸಲು ಸಿದ್ಧವಾಗಿದ್ದೇವೆ ಎನ್ನುವ ನಮ್ಮ ಇಚ್ಛಾಶಕ್ತಿಯನ್ನು ನಾವು ತೋರಿದ್ದೇವೆ. ಇದಕ್ಕೆ ತಕ್ಕಂತೆ ನೂತನ ಕೈಗಾರಿಕಾ ನೀತಿ, ಪರಿಸರಸ್ನೇಹಿ ಸಾರಿಗೆ ನೀತಿ, ಎಐ ಆಧರಿತ ಏಕಗವಾಕ್ಷಿ ಪೋರ್ಟಲ್ ಮುಂತಾದವುಗಳನ್ನು ಹೂಡಿಕೆದಾರರಿಗೆ ಕೊಡುಗೆಯಾಗಿ ನೀಡಿದ್ದೇವೆ. ಸಮಾವೇಶದ ಯಶಸ್ಸಿಗೆ ಹೆಗಲು ಕೊಟ್ಟ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದು ಹೇಳಿದರು.

ಈ ಸಮಾವೇಶವು ಹತ್ತರ ಜೊತೆಗೆ ಇನ್ನೊಂದು ಎನ್ನುವಂತೆ ನಡೆಯುವುದಿಲ್ಲ. ಇದರಲ್ಲಿ ಹೊಸತನವಿರುತ್ತದೆ, ಬೆಳವಣಿಗೆಯ ಮರುಪರಿಕಲ್ಪನೆ ಇರಲಿದೆ ಎಂದು ಸಚಿವರು ಇದುವರೆಗೆ ಹೇಳಿಕೊಂಡು ಬರುತ್ತಿದ್ದ ಮಾತು ಕಳೆದ ಮೂರು ದಿನಗಳಲ್ಲಿ ಸಾಕಾರಗೊಂಡಿತ್ತು. ಇದರಿಂದ ಸಂತೃಪ್ತರಾಗಿದ್ದ ಅವರು, ತಮ್ಮ ಮಾತುಗಳಲ್ಲಿ ಪೊಲೀಸ್ ಪೇದೆಗಳ ಸಹಕಾರದಿಂದ ಹಿಡಿದು ಕೇಂದ್ರ ಸಚಿವರವರೆಗೆ ಪ್ರತಿಯೊಬ್ಬರನ್ನೂ ಸ್ಮರಿಸಿ, ಧನ್ಯವಾದ ಸಮರ್ಪಿಸಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಚಾಲನೆ ಪಡೆದ ಸಮಾವೇಶವು 75 ಗೋಷ್ಠಿಗಳು, ಹತ್ತಾರು ಉದ್ಯಮಗಳು ಮತ್ತು ಸರಕಾರದ ನಡುವಿನ ಸಭೆಗಳು, ಲಕ್ಷಾಂತರ ಕೋಟಿ ಹೂಡಿಕೆಯನ್ನು ಹೊತ್ತು ತರಲಿರುವ ಒಡಂಬಡಿಕೆಗಳು, ಕ್ವಿನ್ ಸಿಟಿ ಅಭಿವೃದ್ಧಿ ಕುರಿತ ವಿಚಾರ ವಿನಿಮಯಗಳಿಗೆ ಸಾಕ್ಷಿಯಾಯಿತು.

ಜತೆಗೆ 19 ದೇಶಗಳ ರಾಯಭಾರಿಗಳು, ಕಾನ್ಸುಲ್ ಜನರಲ್ಗಳು, ಉದ್ಯಮ ಸಂಘಟನೆಗಳ ಉನ್ನತ ಪ್ರತಿನಿಧಿಗಳು, ಜಾಗತಿಕ ಮಟ್ಟದ ಕಂಪನಿಗಳ ಸಿಇಒ ಮತ್ತು ಅಧ್ಯಕ್ಷರ ಜತೆ ಕೈಗಾರಿಕಾ ಸಚಿವರು ಮತ್ತು ಮುಖ್ಯಮಂತ್ರಿಗಳ ಭೇಟಿಯೂ ಸಾಂಗವಾಗಿ ನಡೆಯಿತು. 9 ದೇಶಗಳಿಗೆ ಸಮಾವೇಶದಲ್ಲಿ ಪ್ರತ್ಯೇಕ ಪೆವಿಲಿಯನ್ ಗಳನ್ನೇ ನೀಡಲಾಗಿತ್ತು. ಜೊತೆಗೆ ಕೇಂದ್ರ ಮತ್ತು ರಾಜ್ಯಗಳು ಪರಸ್ಪರ ಸಹಕಾರ ಮತ್ತು ಸಹಭಾಗಿತ್ವದ ವಾಗ್ದಾನವನ್ನೂ ಸಮಾವೇಶದಲ್ಲಿ ಕಾಣಲು ಸಾಧ್ಯವಾಯಿತು.

ಕಾರ್ಯಕ್ರಮದಲ್ಲಿ ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪ್ರಪೆರಾಂಡೋ, ಸಂಸದ ಶಶಿ ತರೂರ್, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ, ಮಂಕಾಳ ವೈದ್ಯ, ಆರ್ ಬಿ ತಿಮ್ಮಾಪುರ, ಈಶ್ವರ ಖಂಡ್ರೆ, ಎಂ ಸಿ ಸುಧಾಕರ್, ಶಿವರಾಜ ತಂಗಡಗಿ, ರಹೀಂ ಖಾನ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮುಂತಾದವರು ಉಪಸ್ಥಿತರಿದ್ದರು.

287 ಕಿ.ಮೀ. ವರ್ತುಲ ರೈಲ್ವೆ ಡಿಪಿಆರ್ ಸಿದ್ಧ: ಸೋಮಣ್ಣ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ, `ಬೆಂಗಳೂರು ನಗರವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇಲ್ಲಿನ ಸುಗಮ ಸಂಚಾರ ವ್ಯವಸ್ಥೆಗೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೀಳಲಿಗೆ ಮುಂತಾದ ಸುತ್ತಮುತ್ತಲಿನ ಪಟ್ಟಣಗಳನ್ನು ಸಂಪರ್ಕಿಸುವ 287 ಕಿ.ಮೀ. ಉದ್ದದ ವರ್ತುಲ ರೈಲು ಯೋಜನೆಗೆ ಡಿಪಿಆರ್ ಅಂತಿಮ ಹಂತದಲ್ಲಿದೆ. ದೇವನಹಳ್ಳಿಯಲ್ಲಿ ಮೆಗಾ ರೈಲ್ವೆ ಟರ್ಮಿನಲ್ ಕೂಡ ಅಸ್ತಿತ್ವಕ್ಕೆ ಬರಲಿದೆ. ಒಟ್ಟಾರೆ ರಾಜ್ಯದಲ್ಲಿ ರೈಲ್ವೆ ಜಾಲವನ್ನು ಕ್ಷಿಪ್ರಗತಿಯಲ್ಲಿ ವಿಸ್ತರಿಸಲಾಗುತ್ತಿದ್ದು, ಈ ವರ್ಷ 7 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಕೊಡಲಾಗಿದೆ. 2030ರ ವೇಳೆಗೆ ರೈಲು ಮಾರ್ಗಗಳ ಸಂಪೂರ್ಣ ವಿದ್ಯುದೀಕರಣ ಆಗಲಿದೆ ಎಂದರು.

ರಾಜ್ಯದಲ್ಲಿ ಕೇಂದ್ರದ ಸಹಯೋಗದೊಂದಿಗೆ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳಿಗೆ 12 ಸಾವಿರ ಕೋಟಿ ರೂ. ಒದಗಿಸಲಾಗಿದೆ. ಬೆಂಗಳೂರು ಸಬರ್ಬನ್ ರೈಲ್ವೆ ಯೋಜನೆಯು 2027ರ ಕೊನೆಯ ಹೊತ್ತಿಗೆ ಮುಗಿಯುವ ನಿಚ್ಚಳ ಲಕ್ಷಣಗಳು ಕಾಣುತ್ತಿವೆ. ಜಿಲ್ಲಾ ಕೇಂದ್ರಗಳ ಹೊರವಲಯದಲ್ಲಿ ಭೂಮಿ, ವಿದ್ಯುತ್ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸಿದರೆ ಕೈಗಾರಿಕಾ ಬೆಳವಣಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಉದ್ಯಮಿಗಳು ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕಗಳ ಕಡೆಗೂ ಹೋಗಿ, ಬಂಡವಾಳ ಹೂಡಬೇಕು. ರಾಜ್ಯ ಮತ್ತು ಕೇಂದ್ರಗಳು ರೂಪಿಸಿರುವ ಕೈಗಾರಿಕಾ ನೀತಿಗಳು ಇದಕ್ಕೆ ಪೂರಕವಾಗಿಯೇ ಇವೆ ಎಂದು ಅವರು ವಿವರಿಸಿದರು.

ಎಂ ಬಿ ಪಾಟೀಲರಿಗೆ ಮೆಚ್ಚುಗೆಯ ಸುರಿಮಳೆ

ಸಮಾರೋಪದಲ್ಲಿ ಮಾತನಾಡಿದ ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪ್ರೊಪೆಂಡ್ರಿಯೂ, ಸಂಸದ ಶಶಿ ತರೂರ್, ಕೇಂದ್ರ ಸಚಿವ ಸೋಮಣ್ಣ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೆಲ್ಲರೂ ಸಮಾವೇಶದ ಯಶಸ್ಸಿಗೆ ನಿರಂತರ 6-7 ತಿಂಗಳ ಕಾಲ ಶ್ರಮಿಸಿದ ಸಚಿವ ಎಂ ಬಿ ಪಾಟೀಲ ಅವರನ್ನು ಮನದುಂಬಿ ಶ್ಲಾಘಿಸಿದರು.

ಪ್ರೊಪೆಂಡ್ರಿಯೂ ಅವರು ಮಾತನಾಡಿ, `ಯೂರೋಪಿನ ದೇಶಗಳು ಸದ್ಯಕ್ಕೆ ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅಲ್ಲಿ ಬೆಳವಣಿಗೆಗೆ ದೊಡ್ಡ ಸವಾಲು ಎದುರಾಗಿದೆ. ಆದರೆ, ಒಟ್ಟಾರೆಯಾಗಿ ಭಾರತ ಮತ್ತು ನಿರ್ದಿಷ್ಟವಾಗಿ ಕರ್ನಾಟಕ ಈ ಸವಾಲನ್ನು ಮೆಟ್ಟಿ ನಿಂತಿರುವುದು ಶ್ಲಾಘನೀಯ. ಕರ್ನಾಟಕದ ಕೈಗಾರಿಕಾ ಮತ್ತು ಇತರ ನೀತಿಗಳು ಹೂಡಿಕೆಗೆ ಮೇಲ್ಪಂಕ್ತಿಯಾಗಿವೆ’ ಎಂದರು.

2017ರಲ್ಲಿ ಗೋವಾದಲ್ಲಿ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ವಿಕತ್ ಭಗತ್ ದೋಷಿಯೆಂದ ಕೋರ್ಟ್

KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ

BREAKING : `ಕಾಫಿ’ ಪ್ರಿಯರಿಗೆ ಬಿಗ್ ಶಾಕ್ : ಶೀಘ್ರವೇ 5 ರೂ.ಬೆಲೆ ಹೆಚ್ಚಳ | Coffee prices hike

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `ಮಾಹಿತಿ ಹಕ್ಕು’ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ : ಸಚಿವ ಹೆಚ್.ಕೆ.ಪಾಟೀಲ್

13/08/2025 8:53 AM1 Min Read

ಬೆಂಗಳೂರಿಗರಿಗೆ ಶಾಕಿಂಗ್​ ನ್ಯೂಸ್​! ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕೈತಪ್ಪಿದ ಮಹಿಳಾ ವಿಶ್ವಕಪ್‌ ಆತಿಥ್ಯ | CHINNASWAMY STADIUM

13/08/2025 8:43 AM1 Min Read

BREAKING : ಬಾಗಲಕೋಟೆಯಲ್ಲಿ ಕರ್ತವ್ಯ ನಿರತ `ASI’ ಹೃದಯಾಘಾತದಿಂದ ಸಾವು.!

13/08/2025 8:42 AM1 Min Read
Recent News

ರಾಜ್ಯದಲ್ಲಿ `ಮಾಹಿತಿ ಹಕ್ಕು’ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ : ಸಚಿವ ಹೆಚ್.ಕೆ.ಪಾಟೀಲ್

13/08/2025 8:53 AM

ಬೆಂಗಳೂರಿಗರಿಗೆ ಶಾಕಿಂಗ್​ ನ್ಯೂಸ್​! ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕೈತಪ್ಪಿದ ಮಹಿಳಾ ವಿಶ್ವಕಪ್‌ ಆತಿಥ್ಯ | CHINNASWAMY STADIUM

13/08/2025 8:43 AM

BREAKING : ಬಾಗಲಕೋಟೆಯಲ್ಲಿ ಕರ್ತವ್ಯ ನಿರತ `ASI’ ಹೃದಯಾಘಾತದಿಂದ ಸಾವು.!

13/08/2025 8:42 AM

Shocking: `ದಿವ್ಯಾಂಗ ಮಹಿಳೆ’ಯನ್ನು ಬೈಕ್​​ನಲ್ಲಿ ಬೆನ್ನಟ್ಟಿ `ಸಾಮೂಹಿಕ ಅತ್ಯಾಚಾರ’ : ವೀಡಿಯೋ ವೈರಲ್ |WATCH VIDEO

13/08/2025 8:38 AM
State News
KARNATAKA

ರಾಜ್ಯದಲ್ಲಿ `ಮಾಹಿತಿ ಹಕ್ಕು’ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ : ಸಚಿವ ಹೆಚ್.ಕೆ.ಪಾಟೀಲ್

By kannadanewsnow5713/08/2025 8:53 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ…

ಬೆಂಗಳೂರಿಗರಿಗೆ ಶಾಕಿಂಗ್​ ನ್ಯೂಸ್​! ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕೈತಪ್ಪಿದ ಮಹಿಳಾ ವಿಶ್ವಕಪ್‌ ಆತಿಥ್ಯ | CHINNASWAMY STADIUM

13/08/2025 8:43 AM

BREAKING : ಬಾಗಲಕೋಟೆಯಲ್ಲಿ ಕರ್ತವ್ಯ ನಿರತ `ASI’ ಹೃದಯಾಘಾತದಿಂದ ಸಾವು.!

13/08/2025 8:42 AM

BREAKING : ಬೆಂಗಳೂರಲ್ಲಿ ನಿವೃತ್ತ ಐಜಿ & ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಕೇಸ್ : `CCB’ ಯಿಂದ ಪುತ್ರಿ `ಕೃತಿಕಾ’ಗೆ ಕ್ಲೀನ್ ಚಿಟ್.!

13/08/2025 8:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.