ಕಾರವಾರ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ನಗರ ಯೋಜನಾ ಸದಸ್ಯನನ್ನು ರೆಡ್ ಹ್ಯಾಂಡ್ ಆಗಿಯೇ ಬಲೆಗೆ ಕೆಡೆವಿದ್ದಾರೆ.
ಕಾರವಾರದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವಾನಂದ ತಾಮ್ರಣ್ಣನವರ ಪ್ರಶಾಂತ ನಾಯಕ ಎಂಬುವರಿಗೆ ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಸಂಬಂಧ ಪ್ರಶಾಂತ ನಾಯಕ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇಂದು ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವಾನಂದ ತಾಮ್ರಣ್ಣನವರ ಪ್ರಶಾಂತ ನಾಯಕರಿಂದ 10,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಆ ಮೂಲಕ ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ.
ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ- ಸಿಎಂ ಸಿದ್ಧರಾಮಯ್ಯ
KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ