ಬೆಂಗಳೂರು : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಇಂದು ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇಂದು ವಿವಿಧ ಕಾರ್ಯಕ್ರಮಗಳಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾಗಿಯಾಗಲಿದ್ದಾರೆ.ಬೆಳಗ್ಗೆ ಕೋಲಾರದ ಅರಸಪುರಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಲಿದ್ದಾರೆ. ವೇಮಗಲ್ ನ ಟಾಟಾ ಕ್ಯಾಂಪಸ್ ಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ ಖಾಸಗಿ ಹೋಟೆಲ್ ನಲ್ಲಿ ಸಂವಾದದಲ್ಲಿ ಸಚಿವ ಅಶ್ವಿನಿ ವೈಷ್ಣವ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.