ಹಾಸನ : ಒಂದು ಕಡೆ ಕಾಂಗ್ರೆಸ್ ನ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಧ್ಯ ವಿಪಕ್ಷ ನಾಯಕ ಆರಶೋಕ್ ಮುಂಬರುವ ನವೆಂಬರ್ 15 ತಾರೀಕಿನ ಒಳಗೆ ಸಿಎಂ ಬದಲಾಗಲಿದ್ದು ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಪೋಟಿಸಲಿದೆ ಎಂದು ಭವಿಷ್ಯ ನುಡಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ನವೆಂಬರ್15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಯಾಗುವುದು ನಿಶ್ಚಿತವಾಗಿದ್ದು, ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ಅವರು ಭವಿಷ್ಯ ನುಡಿದರು.
ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ನನಗೆ ಖಚಿತ ಮಾಹಿತಿ ಇದೆ. ಆ ಬಳಿಕ ಕಾಂಗ್ರೆಸ್‌ನಲ್ಲಿ ಉಂಟಾಗುವ ಜ್ವಾಲಾ ಮುಖಿ ನಂದಿಸಲು ಈಗಲೇ ಅಗ್ನಿಶಾಮಕವಾಹನಗಳನ್ನು ಬುಕ್ ಮಾಡಿಕೊಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ. ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಅಭಿವೃದ್ಧಿ ಅಭಾವ ಎದ್ದು ಕಾಣುತ್ತಿದೆ.
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳಾಗಿವೆ. ಸಿಎಂ ಸಿದ್ದರಾಮಯ್ಯ ಬಣವಾದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಇನ್ನೊಂದು ಬಣವಾಗಿದೆ. ಡಿಸೆಂಬ್ ಡಿಕೆ ಶಿವಕುಮಾರ್ ಅವರು ಹೋದಲೆಲ್ಲ ಕಾವರ ಕಾರ್ಯಕರ್ತರು ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗುತ್ತಾರೆ. ಇನ್ನೊಂದು ಕಡೆ ಇನ್ನು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದಾರೆ ಹೀಗಾಗಿ ಕಾಂಗ್ರೆಸ್ ಪಕ್ಷ ಇದೀಗ ಇಬ್ಭಾಗವಾಗಿದೆ ಎಂದು ತಿಳಿಸಿದರು.