ಚಾಮರಾಜನಗರ : ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಚಾಮರಾಜನಗರದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಚಾಮರಾಜನಗರದಲ್ಲಿ ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬರು, ಗ್ರಾಹಕರಿಗೆ ಏನನ್ನೋ ತಿಂಡಿ ಕಟ್ಟಿ ಕೊಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಅವರಿಗೆ ಹೃದಯಸ್ತಂಬನವಾಗಿದೆ. ಕೂಡಲೇ ಬೇಕರಿಯಲ್ಲಿ ಆ ವ್ಯಕ್ತಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.