ಬೆಂಗಳೂರು : ಬೀದರ್ ವಿಶ್ವವಿದ್ಯಾಲಯ ಒಂದನ್ನು ಹೊರತುಪಡಿಸಿ ರಾಜ್ಯದಲ್ಲಿ ಬಿಜೆಪಿ ಅವಧಿಯಲ್ಲಿ ಆರಂಭಿಸಲಾಗಿದ್ದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದ್ದು ಸರ್ಕಾರದ ಈ ಒಂದು ನಡೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ.ಬಳಿಕ ಸರ್ಕಾರದ ಈ ಒಂದು ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಕುರಿತು ಚಿಂತನೆ ನಡೆಸಿದ್ದಾರೆ.
ಹೌದು ಇಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಡಾ.ಸಿಎನ್ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ.
ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10 ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿತ್ತು ಆ ಪೈಕಿ ಬೀದರ್ ವಿಶ್ವವಿದ್ಯಾಲಯವನ್ನು ಹೊರತುಪಡಿಸಿ, ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಉಪ ಸಮಿತಿ ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.