ಮಹಾರಾಷ್ಟ್ರ : ಈಗಾಗಲೇ ಹಲವು ರಾಜ್ಯಗಳಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ತಡೆಯಲು ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದೀಗ ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಸರ್ಕಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.ಈ ಮೂಲಕ ಲವ್ ಜಿಹಾದ್ ವಿರುದ್ಧ ಮಹಾರಾಷ್ಟ್ರ ಸಮರ ಸಾರಿದೆ.
ಹೌದು ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ತಡೆಗೆ ಕಾನೂನು ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ಇದೀಗ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರ ರಚಿಸಿದ ಸಮಿತಿಯಲ್ಲಿ, ಮಹಾರಾಷ್ಟ್ರದ ಡಿಜಿಪಿ ಜೊತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಸಾಮಾಜಿಕ ನ್ಯಾಯ ಇಲಾಖೆ ಮತ್ತು ವಿಶೇಷ ಸಹಾಯ ಇಲಾಖೆಯ ಕಾರ್ಯದರ್ಶಿಗಳು ಮತ್ತು ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೂಡ ಇದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅಧ್ಯಯನದ ನಂತರ, ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ಘಟನೆಗಳನ್ನು ಎದುರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಸಮಿತಿಯು ತಿಳಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಮಿತಿಯು ಇತರ ರಾಜ್ಯಗಳಲ್ಲಿ ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಹ ಅಧ್ಯಯನ ಮಾಡುತ್ತದೆ.
ಇತರ ಹಲವು ರಾಜ್ಯಗಳಲ್ಲಿಯೂ ಸಹ ರಾಜ್ಯ ಸರ್ಕಾರಗಳು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ತಡೆಯಲು ಕ್ರಮಗಳನ್ನು ತೆಗೆದುಕೊಂಡಿವೆ.ಈ ಪಟ್ಟಿಗೆ ಈಗ ಮಹಾರಾಷ್ಟ್ರ ಸೇರಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅಧ್ಯಯನದ ನಂತರ, ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ಘಟನೆಗಳನ್ನು ಎದುರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಸಮಿತಿಯು ತಿಳಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.