ಬೆಂಗಳೂರು : ಆಸ್ತಿ ಮಾಲೀಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಲ್ಲ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಶೀಘ್ರವಾಗಿ ಎಲೆಕ್ಟ್ರಾನಿಕ್ ಬಿ- ಖಾತಾ ನೀಡಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಬೃಹತ್ ಮಹಾನಗರ ಪಾಲಿಕೆ ಬೆಂಗಳೂರು (ಬಿಬಿಎಂಪಿ) ಹೊರತುಪಡಿಸಿ ಉಳಿದ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 30 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್ ದಾಖಲೆ (ಇ-ದಾಖಲೆ) ಇಲ್ಲ. ಇದರಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಈ ಎಲ್ಲ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಶೀಘ್ರವಾಗಿ ಎಲೆಕ್ಟ್ರಾನಿಕ್ ಬಿ- ಖಾತಾ ನೀಡುವಂತೆ ಸೂಚನೆ ನೀಡಿದ್ದಾರೆ.
ಶನಿವಾರ ಕಂದಾಯ ಸಚಿವಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೌರಾಡಳಿತ ಸಚಿವ ರೆಹಮಾನ್ ಖಾನ್ ಜತೆ ಸಭೆ ನಡೆಸಿದ ಅವರು, ನಾಲ್ಕು ಇಲಾಖೆಗಳು ಸಮನ್ವಯ ಸಾಧಿಸಿ ರಾಜ್ಯಾದ್ಯಂತ ಇ-ಖಾತಾ ಹೊಂದಿಲ್ಲದ ಆಸ್ತಿಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.