ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರಿನ ಆನೇಕಲ್ ಉಪವಿಭಾಗದ ಜಿಗಣಿ ಠಾಣೆಯ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ರೌಡಿಗಳ ಮನೆಗಳಲ್ಲಿ ಶೋಧ ನಡೆಸಿದ್ದಾರೆ. ಬಳಿಕ 6 ರೌಡಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.