ಹಾಸನ : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಎಟಿಎಂ ನಿಂದ ಲಕ್ಷಾಂತರ ರೂಪಾಯಿ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ ತಡರಾತ್ರಿ ಕಳ್ಳರು ಎಟಿಎಂಗೆ ಕನ್ನ ಹಾಕಿದ್ದು, ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








