ಹುಬ್ಬಳ್ಳಿ: ನಗರದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನ ನಡೆದಿದೆ.
ಹುಬ್ಬಳ್ಳಿಯ ವಿದ್ಯಾನಗರದ ಬಳಿಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸುಜಿತ್(21) ಹಾಗೂ ವಿಕಾಸ್(17) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಅಪಘಾತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿರೋದು ಕಂಡು ಬಂದಿದೆ.
ಅಂದಹಾಗೇ ಸುಜಿತ್ ಹಾಗೂ ವಿಕಾಸ್ ಅಜ್ಜಿಯ ತಿಥಿ ಕಾರ್ಯ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಸಂಸದ ಬಸವರಾಜ ಬೊಮ್ಮಾಯಿ
SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL