ನವದೆಹಲಿ: ರೈಲ್ವೆ ನಿಲ್ದಾಣಗಳಲ್ಲಿ ಹೋಲ್ಡಿಂಗ್ ವಲಯಗಳನ್ನು ರಚಿಸಲು, ಜನಸಂದಣಿ ನಿಯಂತ್ರಣಕ್ಕಾಗಿ ಎಐ ತಂತ್ರಜ್ಞಾನವನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಕೇಂದ್ರ ಸರ್ಕಾರವು ದೇಶಾದ್ಯಂತ ಎಲ್ಲಾ ನಿಲ್ದಾಣಗಳಲ್ಲಿ ಶಾಶ್ವತ ಹೋಲ್ಡಿಂಗ್ ವಲಯಗಳನ್ನು ನಿರ್ಮಿಸಲಿದೆ ಮತ್ತು ಜನಸಂದಣಿ ಮತ್ತು ಬಿಕ್ಕಟ್ಟು ನಿರ್ವಹಣೆಗಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಿದೆ ಎಂದು ಮೂಲಗಳು ತಿಳಿಸಿವೆ.
ಅಂದಹಾಗೇ ಎರಡು ದಿನಗಳ ಹಿಂದಷ್ಟೇ ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಜನ ಸಂದಣಿ ಉಂಟಾದ ಪರಿಣಾಮ, ರೈಲು ಹತ್ತೋದಕ್ಕೆ ನೂಗು ನುಗ್ಗಲು ಉಂಟಾಗಿ 18 ಮಂದಿ ಪ್ರಾಯಾಣಿಕರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತದ್ದೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ.
ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ