ಬೆಂಗಳೂರು: ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳಬೇಡಿ ಅಂತ ಹೇಳಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ಅದು ಹೇಳಿಕೆ ಅಷ್ಟೇ. ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯೋದಿಲ್ಲ. ಈಗ ಎಚ್ಚರಿಕೆನ ಯಾರು ಕೇಳ್ತಾರೆ ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಅವರ ಹೆಸರನ್ನು ಹೇಳುತ್ತಿದ್ದಾರೆ. ಅವರು ಆ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಅಂತ ಗುಡುಗಿದರು.
ನನ್ನದು ಇದು ಆರೋಪವಲ್ಲ. ವಾಸ್ತವ ಸಂಗತಿಯಾಗಿದೆ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ. 50 ವರ್ಷ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನಾನು ಮಾತನಾಡಿದರೇ ಸತ್ಪರಿಣಾಮ ಬೀರುವ ಮಾತನಾಡುತ್ತೇನೆಯೇ ಹೊರತು, ದುಷ್ಪರಿಣಾಮ ಬೀರುವಂತೆ ಮಾತನಾಡಲ್ಲ ಎಂಬುದಾಗಿ ತಿಳಿಸಿದರು.
ನಾನು ಸಿಎಂ ಪೂರ್ಣಾವಧಿ ವಿಚಾರದಲ್ಲಿ ಹಠಕ್ಕೆ ಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದಾಗಿದೆ. ಹೈಕಮಾಂಡ್ ಹೇಳಿದಂತೆ ಲೋಕಸಭೆ ಚುನಾವಣೆವರೆಗೆ ಅಧ್ಯಕ್ಷ ಅಂತ ಕೇಳಿದ್ದೇವೆ. ಡಿಸಿಎಂ ಸ್ಥಾನ ಹೆಚ್ಚುವರಿ ಕೊಟ್ಟಿದ್ದರೇ, ಲೋಕಸಭೆ ಚುನಾವಣೆಯಲ್ಲಿ ಸಹಾಯ ಆಗುತ್ತಿದ್ದು. ಈಗ ಕೇಳಲ್ಲ. ಡಿಸಿಎಂ ಸ್ಥಾನ ಅಂದರೆ ಏನು ತಲೆ ಮೇಲೆ ಹೆಚ್ಚುವರಿ ಕಿರೀಟ ಏನು ಇರಲ್ಲ ಎಂಬುದಾಗಿ ಕಿಡಿಕಾರಿದರು.
ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ