ಮಂಡ್ಯ: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಹಿಯನ್ನೇ ನಕಲು ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ಪೀಕಿದ್ದಂತ ವಂಚಕ ವೆಂಕಟೇಶನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವೆಂಕಟೇಶ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವರಿಗೆ ನಂಬಿಸಿದ್ದನು. ಅಲ್ಲದೇ ಅವರಿಂದ ಲಕ್ಷಾಂತರ ರೂ ಹಣವನ್ನು ಪಡೆದು, ನಕಲಿ ಸಹಿ ಮಾಡಿದಂತ ನೇಮಕಾತಿ ಆದೇಶ ಪತ್ರ ನೀಡಿ ವಂಚಿಸಿದ್ದನು.
ವಂಚನೆಗೆ ಒಳಗಾದಂತ ಅಭ್ಯರ್ಥಿಗಳು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದಂತ ಪೊಲೀಸರು ಸಿಎಂ ಸಿದ್ಧರಾಮಯ್ಯ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನೀಡಿರುವಂತ ನಕಲಿ ಆದೇಶ ಪತ್ರವನ್ನು ಕಂಡು ಶಾಕ್ ಆಗಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಮಂಡ್ಯದ ಪೂರ್ವ ಠಾಣೆಯ ಪೊಲೀಸರು, ಸತತ ಮೂರು ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸಿ, ಕೊನೆಗೂ ವಂಚಕ ವೆಂಕಟೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಡ್ಯದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.
ಫೆ.20ರಂದು ದೆಹಲಿಯ ಹೊಸ ಸಿಎಂ ರಾಮ್ ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ: ಮೂಲಗಳು
ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ