ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಶಾಸಕ ಬಿ ಆರ್ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಬಿ.ಆರ್.ಪಾಟೀಲ, ಮಾನ್ಯ ಶಾಸಕರು, ಆಳಂದ ವಿಧಾನಸಭಾ ಕ್ಷೇತ್ರ ಇವರನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ (ಯೋಜನ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ.