ಮೈಸೂರು: ನಗರದ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ, ಗಲಾಟೆ ಪ್ರಕರಣ ಸಂಬಂಧ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಆರೋಪಿ ಸತೀಶ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಫೆಬ್ರವರಿ.10ರಂದು ಆರೋಪಿ ಸತೀಶ್ ಎಂಬಾತ ವಿವಾದಿತ ಪೋಸ್ಟ್ ಒಂದನ್ನು ಹಾಕಿದ್ದನು. ಇದರಿಂದ ಉದಯಗಿರಿ ಪೊಲೀಸ್ ಠಾಣೆಯ ಬಳಿಯಲ್ಲಿ ಗಲಾಟೆ ನಡೆದು, ಕಲ್ಲು ತೂರಾಟ ಕೂಡ ನಡೆದಿತ್ತು.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿವಾದಿತ ಪೋಸ್ಟ್ ಹಾಕಿದ್ದಂತ ಆರೋಪಿ ಸತೀಶ್ ಆಲಿಯಾಸ್ ಪಾಂಡುರಂಗನ್ ಎಂಬಾತನನ್ನು ಬಂಧಿಸಿ, ಜೈಲಿಗಟ್ಟಿದ್ದರು.
ಇಂದು ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಮೈಸೂರಿನ ಎರಡನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿತು. ವಾದ ಪ್ರತಿವಾದ ಆಲಿಸಿದಂತ ಕೋರ್ಟ್ ಆರೋಪಿ ಸತೀಶ್ ಗೆ ಜಾಮೀನ ಮಂಜೂರು ಮಾಡಿದೆ.
ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ?: ರಾಜ್ಯ ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ