ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ಭೀಕರ ಕಾಡ್ಗಿಚ್ಚು ಉಂಟಾಗಿದೆ. ಗಾಳಿಯಿಂದಾಗಿ ಬೆಂಕಿಯ ಕೆನ್ನಾಲಿಗೆ ಶರವೇಗದಲ್ಲಿ ಕಾಡಿಗೆ ಹರಡುತ್ತಿದ್ದು, ಅಪಾರ ಸಸ್ಯ ಸಂಪತ್ತು ಧಗ ಧಗಿಸಿ ಹೊತ್ತಿ ಉರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ಗಾಳಿಯ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿಯುತ್ತಿದೆ. ಇದರಿಂದಾಗಿ ಚಂದ್ರದ್ರೋಣ ಪರ್ವತದ ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮವಾಗಿದೆ.
ಪಶ್ಟಿಮಘಟ್ಟ ಸಾಲಿನ ಶೋಲಾ ಅರಣ್ಯ ಸಂಪತ್ತು ಕಾಡ್ಗಿಚ್ಚಿನಿಂದ ಭಸ್ಮವಾಗಿದೆ. ಮುಳ್ಳಯ್ಯನ ಗಿರಿ, ಸೀತಾಳಯ್ಯನ ಗಿರಿಗೂ ಕಾಡ್ಗಿಚ್ಚು ವ್ಯಾಪಿಸಿದೆ. ಸಂಜೆಯಿಂದ ಹೊತ್ತಿ ಉರಿಯುತ್ತಿದ್ದು, ಬೆಂಕಿ ನಂದಿಸಲು ನೂರಾರು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿ ಭೇಟಿ ನೀಡಿದ್ದಾರೆ. ಖುದ್ದು ಸ್ಥಳದಲ್ಲಿ ಇದ್ದು ಕಾಡ್ಗಿಚ್ಚು ನಂದಿಸೋ ಕಾರ್ಯದಲ್ಲಿ ತೊಡಗಿರೋದಾಗಿ ತಿಳಿದು ಬಂದಿದೆ.
ಚಾಂಪಿಯನ್ಸ್ ಟ್ರೋಫಿ 2025: ಪಾಕ್ ಸ್ಟೇಡಿಯಂಗಳಲ್ಲಿ ಭಾರತೀಯ ಧ್ವಜ ಇಲ್ಲ: ಪಿಸಿಬಿ ಸ್ಪಷ್ಟನೆ