ಬೆಂಗಳೂರು : ಮುಂಬರುವ ಚುನಾವಣೆ ದೃಷ್ಟಿಯಿಂದ ಈಗಿನಿಂದಲೇ ಕಾಂಗ್ರೆಸ್ ಭಾರಿ ಸಿದ್ಧತೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ನ ಹಲವು ಶಾಸಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಪ್ರಯತ್ನಿಸುತ್ತಿದೆ. ಹಾಗಾಗಿ ಜೆಡಿಎಸ್ ನ ಹಲವು ಶಾಸಕರ ಸಂಪರ್ಕದಲ್ಲಿರುವ ಕಾಂಗ್ರೆಸ್ ನಾಯಕರು, ಅವರನ್ನು ಪಕ್ಷಕ್ಕೆ ಸೆಳೆಯುವ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಹೌದು ಜೆಡಿಎಸ್ ಶಾಸಕರ ಆಪರೇಷನ್ ಗೆ ಮುಂದಾದ ಕಾಂಗ್ರೆಸ್ ನಾಯಕರು, ಜೆಡಿಎಸ್ ಪಕ್ಷದ 6 ಶಾಸಕರನ್ನು ಸಂಪರ್ಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.. ಈಗ ಒಟ್ಟು 10 ಶಾಸಕರ ಸಂಪರ್ಕಕ್ಕೆ ಯತ್ನಿಸಿದ್ದು, ಬಿಜೆಪಿ ವಿರುದ್ಧ ಗೆದ್ದಿರುವ ಜೆಡಿಎಸ್ ಶಾಸಕರನ್ನು ಸಳೆಯಲು ಮೊದಲು ಆದ್ಯತೆ ನೀಡಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ, ಶಾಸಕ ಸಮೃದ್ಧಿ ಮಂಜುನಾಥ್ ಸೇರಿ ಹಲವು ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಮುಂದಿನ ಚುನಾವಣೆಗೆ ಈಗಲೇ ಆಪರೇಷನ್ ಹಸ್ತ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.