ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ಇಡೀ ಹುಬ್ಬಳ್ಳಿ ಜನತೆಯನ್ನು ಬೆಚ್ಚಿಬೀಳಿಸಿದ್ದು 18 ವಯಸ್ಸಿನ ಯುವತಿ ಒಬ್ಬಳು 50 ವರ್ಷದ ಅಂಕಲ್ ಜೊತೆಗೆ ಓಡಿ ಹೋಗಿ ಮದುವೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 50 ವರ್ಷದ ಅಕಲ್ ಜೊತೆ 18 ವರ್ಷದ ಯುವತಿ ಮದುವೆ ಪ್ರಕರಣದಲ್ಲಿ ಹುಬ್ಬಳ್ಳಿ ಪೊಲೀಸರು ಕಿಲಾಡಿ ಅಂಕಲ್‌ನನ್ನು ಬಂಧಿಸಿದ್ದಾರೆ. ಕೇಶ್ವಾಪುರದ ಚಾಲುಕ್ಯ ನಗರದ ಪ್ರಕಾಶ್ ಕಂಜರಘಾಟ ಬಂಧಿತ ಆರೋಪಿಯಾಗಿದ್ದಾನೆ.
ಹೌದು ಮನೆಯಿಂದ ನಾಪತ್ತೆಯಾಗಿದ್ದ ಹುಬ್ಬಳ್ಳಿಯ ಕರೀಷ್ಮಾ, 50 ವರ್ಷದ ಸೆಕ್ಯೂರಿಟಿ ಪ್ರಕಾಶ್ ಎನ್ನುವಾತನ ಜೊತೆ ಪತ್ತೆಯಾಗಿದ್ದಳು. ಅಲ್ಲದೇ ಇಬ್ಬರು ಮದುವೆಯಾಗಿದ್ದರು. ಆದ್ರೆ, ಅದೇನಾಯ್ತೋ ಏನೋ ಕರೀಷ್ಮಾ ಪ್ರಕಾಶನನ್ನು ಬಿಟ್ಟು ವಾಪಸ್ ಮನೆಗೆ ಓಡಿ ಬಂದಿದ್ದಾಳೆ. ಅಲ್ಲದೇ ಬಲವಂತವಾಗಿ ನನ್ನ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ಪ್ರಕಾಶನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.
ಅಲ್ಲದೇ ಈ ಸಂಬಂಧ ಕರೀಷ್ಮಾ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಒಂದು ವರ್ಷದ ಹಿಂದೆಯೂ ನನಗೆ ಪ್ರಕಾಶ್ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದೀಗ ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕಾಶನನ್ನು ಬಂಧಿಸಿದ್ದಾರೆ.ಪ್ರಕಾಶ್ ಎಂಬಾತನಿಗೆ ವಯಸ್ಸು 50. ಈತನಿಗೆ 22 ವರ್ಷದ ಮಗನೂ ಇದ್ದನಂತೆ. ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಗೂ ನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪವಿದೆ.ಅಲ್ಲದೇ ಪ್ರಕಾಶ್ ನಿತ್ಯ ತನ್ನ ಹೆಂಡತಿ ಮೇಲೆ ದೈಹಿಕ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯಿದ್ದರೂ, ಅದೇ ಏರಿಯಾದ ಯುವತಿ ಮೇಲೆಯೂ ಪ್ರಕಾಶ್ ಕಣ್ಣು ಹಾಕಿದ್ದನಂತೆ.
ಯುವತಿಯ ಆರೋಪವೇನು?
ನನಗೆ ಮೋಸ ಮಾಡಿ ಮದುವೆ ಮಾಡಿಕೊಂಡಿದ್ದಾನೆ. ಮೋಸ ಮಾಡಿದ ಅಂಕಲ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಆಗ್ರಹಿಸಿದ್ದಾಳೆ. ಕೊಲ್ಲಾಪುರದಲ್ಲಿದ್ದ ನನ್ನನ್ನು ಫೋನ್ ಮೂಲಕ ಕರೆಸಿಕೊಂಡಿದ್ದ. ಬಳಿಕ ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿದ್ದ. ಆ ನಂತರ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡು ಕೋಣೆಯೊಂದರಲ್ಲಿ ಕೂಡಿಹಾಕಿ ಹಿಂಸೆ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ.