ಕಲಬುರ್ಗಿ : ಟಿಬಿ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಒಬ್ಬ ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಆದರೆ ಇಂದು ತೀವ್ರವಾಗಿ ಆತ ಮನನೊಂದಿದ್ದು ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ರೋಗಿಯನ್ನು ನಗರದ ಡೆಕ್ಕನ್ ಕಾಲೇಜು ಬಳಿಯ ನಿವಾಸಿ ಸೈಯದ್ ಅಝರುದ್ದೀನ್ (33) ಎಂದು ಗುರುತಿಸಲಾಗಿದೆ. ಸೈಯದ್ ಅಭಿವೃದ್ಧಿ ನಿಗೆ ಟಿವಿ ರೋಗ ಇತ್ತು ಕಳೆದ ಕೆಲವು ದಿನಗಳ ಹಿಂದೆ ಆತನನ್ನು ಜಲಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಅನಾರೋಗ್ಯದಿಂದ ತೀವ್ರವಾಗಿ ಬಳಲುತ್ತಿದ್ದ ಆತ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಕುರಿತು ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.