ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ.
ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅಂತ ಹೇಳಿದ್ದಾರೆ ಎಂದರು.
ತನಿಖೆ ಇನ್ನೂ ಬಾಕಿ ಇರುವಾಗಲೇ ಬಿ ರಿಪೋಸ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋಸ್ಟ್ ಸಲ್ಲಿಸೋ ಮಾಹಿತಿ ಇದೆ. ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿಸಿದರು.
BREAKING:ಪರ್ವೇಶ್ ವರ್ಮಾ ದೆಹಲಿ ಸಿಎಂ ಆಗ್ತಾರಾ? ಬಿಜೆಪಿ ಅಭ್ಯರ್ಥಿ ಯಾರು | Delhi CM Announcement
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ