ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದಂತ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಒಂದು ಬಾರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರವೇ ಮಾರ್ಗಸೂಚಿ ಪ್ರಕಟಿಸುವುದಾಗಿ ಸರ್ಕಾರ ತಿಳಿಸಿದೆ.
ಈ ಸಂಬಂಧ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗಿದೆ. ಎನ್‌ಎಚ್‌ಎಂ ನೇರ ಗುತ್ತಿಗೆ ಸಿಬ್ಬಂದಿಗಳು ಸಾಮಾನ್ಯವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುತ್ತಿದ್ದು, ಅವರು ತಮ್ಮ ಸಂಪೂರ್ಣ ಕರ್ತವ್ಯದ ಅವಧಿಯುದ್ದಕ್ಕೂ ಆಯಾ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕಾಗಿರುತ್ತದೆ. ಸದರಿ ಸಿಬ್ಬಂದಿಗಳ ಬಹುದಿನದ ಬೇಡಿಕೆಗೆ ಸ್ಪಂದಿಸಿ, ರಾಜ್ಯ ಸರ್ಕಾರವು ಸೇವಾ ಅವಧಿಯಲ್ಲಿ ಒಂದು ಬಾರಿ ಅಂತರ್‌ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಅತಿ ಶೀಘ್ರದಲ್ಲಿ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಅಂತ ತಿಳಿಸಿದೆ.
GOOD NEWS: ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ಗುಡ್ ನ್ಯೂಸ್: ‘ಸಾಮಾಜಿಕ ಭದ್ರತಾ ವಿಮಾ ಯೋಜನೆ’ ಜಾರಿ