ಯಾದಗಿರಿ : ಜಾತ್ರೆಯಲ್ಲಿ ಬ್ಯಾನರ್ ಹಾಕಿದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನ ಬೀರನಕಲ್ ಗ್ರಾಮದಲ್ಲಿ ನಡೆದಿದೆ.
ಬೀರನಕಲ್ ಗ್ರಾಮದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನ ಗ್ರಾಮ ದ್ಯಾಮವ್ವ ಜಾತ್ರೆಯLLI ಶುಭಾಶಯ ಕೋರಿ ಯುವಕರು ಬ್ಯಾನರ್ ಹಾಕಿದ್ದರು. ಬ್ಯಾನರ್ ಹಾಕಿದನ್ನು ಮತ್ತೊಂದು ಯುವಕರ ಗುಂಪು ಪ್ರಶ್ನಿಸಿದೆ.
ಆಗ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಯುವಕರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ದೊಣ್ಣೆಗಳಿಂದ ಪರಸ್ಪರ ಬಡಿದಾಡಿಕೊಂಡಿದ್ದಾರೆ. 10 ಕ್ಕೂ ಹೆಚ್ಚು ಗಾಯಾಳುಗಳನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.