2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಮತ್ತು ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಶುಲ್ಕ ಮರುಪಾವತಿಯ ಸದುಪಯೋಗ ಪಡಿಸಿಕೊಳ್ಳಬೇಕು.
ಅರ್ಹ ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ https://ssp.postmatric.karnataka.gov.in ನ್ನು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಗೆ ಭೇಟಿ ನೀಡಬೇಕು. ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ 8050770005, ಇ-ಮೇಲ್ bcwdhelpline@gmail.com ನ್ನು ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ನ್ನು ಹಾಗೂ ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸುವಂತೆ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.