ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಪುಟ್ಟ ಪುಟ್ಟ ಬಾಲಕಿಯರ ಮೇಲೆ ಮದರಸದಲ್ಲಿ ಪಾಪಿ ಒಬ್ಬ ಹಲ್ಲೆ ನಡೆಸಿದ್ದಾನೆ. ಬೆಂಗಳೂರಿನ ಮದರಸಾದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಹೆಗಡೆ ನಗರದಲ್ಲಿರುವ ಮದರಸದಲ್ಲಿ ಈ ಒಂದು ಘಟನೆ ನಡೆದಿದೆ.
ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ಕಚೇರಿಗೆ ಕರೆದು ಬಾಲಕಿಯರ ಮೇಲೆ ಹಲ್ಲೆ ನಡೆಸಲಾಗಿದೆ. ಅನ್ವರ್ ಅಲಿ ರಶೀದ್ ತಂದೆ ಹಸನ್ ಅಲಿ ನಡೆಸುತ್ತಿರುವ ಈ ಒಂದು ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ದೃಶ್ಯ ಕಂಡು ಪೋಷಕರಿಂದ ಮದರಸ ಮುಂದೆ ಗಲಾಟೆ ಮಾಡಿದ್ದು, ಮದರಸ ಪ್ರಿನ್ಸಿಪಲ್ ಸಹೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ಘಟನೆ ಸಂಭಂದ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪಿಯನ್ನು ಇದೀಗ ಕೊತ್ತನೂರು ಕಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.