ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.ಹೌದು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎನ್ನುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಷನ್ ಕುರಿತು ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿಬಿಜೆಪಿ ಮುಖಂಡ ಎನ್.ಆರ್.ರಮೇಶ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ದೂರಿನಲ್ಲಿ ಏನಿದೆ?
ಮೈಸೂರು ಜಿಲ್ಲೆಯ ಹಿಣಕಲ್ ಗ್ರಾಮದ ಸರ್ವೆ ನಂ.70/4ಎ ಜಾಗವನ್ನು ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಡಿನೋಇಫಿಕೇಷನ್ ಮಾಡುವಲ್ಲಿ ಸಿಎಂ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಎನ್.ಆರ್.ರಮೇಶ್ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.