ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಬಸ್ಸುಗಳಲ್ಲಿ ಕ್ಯಾಶ್ ಲೆಸ್ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್ ಖರೀದಿಸಿದಂತ ಹಣವನ್ನು ಸ್ಕ್ಯಾನ್ ಮಾಡಿ, ಪೇ ಮಾಡಬಹುದಾಗಿದೆ.
ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್ ಯುಗ ಆರಂಭಗೊಂಡಿದೆ ಎಂದಿದ್ದಾರೆ.
ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ರಾಜ್ಯ ಸರ್ಕಾರ ಮುಕ್ತಿ ಹಾಡಿದ್ದು, ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಸುಖಕರವಾಗಿರಿಸಲು ಕ್ಯಾಶ್‌ಲೆಸ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ನೀವು ಗೂಗಲ್‌ಪೇ, ಫೋನ್ ಪೇ ಅಥವಾ ಇತರೆ ಯಾವುದೇ ಯುಪಿಐ ಆ್ಯಪ್ ಬಳಕೆ ಮಾಡುತ್ತಿದ್ದಲ್ಲಿ ಕ್ಯಾಷ್‌ನ ಚಿಂತೆ ಮರೆತು ನಿಶ್ಚಿಂತರಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.
ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್ ಯುಗ ಆರಂಭಗೊಂಡಿದೆ.
ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ರಾಜ್ಯ ಸರ್ಕಾರ ಮುಕ್ತಿ ಹಾಡಿದ್ದು, ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಸುಖಕರವಾಗಿರಿಸಲು ಕ್ಯಾಶ್‌ಲೆಸ್ ವ್ಯವಸ್ಥೆಯನ್ನು… pic.twitter.com/CwdCJtgRz8
— Siddaramaiah (@siddaramaiah) February 19, 2025
BREAKING : ಪಾಕ್ ತಂಡಕ್ಕೆ ಮತ್ತೊಂದು ಶಾಕ್ : `ಚಾಂಪಿಯನ್ಸ್ ಟ್ರೋಫಿ’ಯಿಂದ `ಫಖರ್ ಜಮಾನ್’ ಔಟ್.!
ಕೋಲಾರದ ವೇಮಗಲ್ ನಲ್ಲಿ 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ