ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಇಂಧನ ಇಲಾಖೆಯು ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಆರಂಭವಾಗಿದ್ದು, ಅವರ ಓದಿಗೆ ಸಮಸ್ಯೆಯಾಗದಂತೆ ಪ್ರತಿನಿತ್ಯ ಸಂಜೆ 6 ಗಂಟೆಯಿಂದ ಬೆಳಗ್ಗೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಬೇಕೆಂದು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಂಗಳು) ಸೂಚನೆ ನೀಡಿದೆ.
ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಿಂಗಪ್ ಫೇಸ್ ವಿದ್ಯುತ್ ಪೂರೈಕೆಗೆ ಸೂಚನೆ ನೀಡಲಾಗಿದ್ದು, ಈ ಅವಧಿಯಲ್ಲಿ ಸಿಂಗಲ್ ಫೇಸ್ ವಿದ್ಯುತ್‌ನಲ್ಲೇ ಅಕ್ರಮವಾಗಿ ನೀರಾವರಿ ಪಂಪ್‌ಸೆಟ್ ಚಾಲುಗೊಳಿಸು ವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ಸೂಚನೆ ನೀಡಿದ್ದಾರೆ. ತೋಟದ ಮನೆಗಳೂ ಸೇರಿದಂತೆ ಎಲ್ಲೆಡೆ ರಾತ್ರಿ ವೇಳೆ ವಿದ್ಯಾರ್ಥಿ ಗಳ ಅನುಕೂಲಕ್ಕಾಗಿ ಸಿಂಗಲ್ ಫೇಸ್ ವಿದ್ಯುತ್ ಪೂರೈಸಬೇಕು. ಈ ಅವಧಿಯಲ್ಲಿ ಕೃಷಿ ಪಂಪ್‌ಸೆಟ್ ಗಳನ್ನು ಚಾಲುಗೊಳಿಸದಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ತಿಳಿಸಿದ್ದಾರೆ.