ಬೀದರ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ 6 ಮಂದಿ ಭಕ್ತರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಾಜ್ಯದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೀದರ್ ಜಿಲ್ಲೆಯ ಐವರು ತೆರಳಿದ್ದರು. ಈ ವೇಳೆ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕುಂಭಮೇಳ ಮುಗಿಸಿ ಕಾಶಿಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಉತ್ತರಪ್ರದೇಶದ ರೂಪಾಪೂರ ಬಳಿ ಲಾರಿಗೆ ಈ ಕ್ರೂಜರ್ ಡಿಕ್ಕಿಯಾಗಿದೆ. ಲಾರಿ ಕ್ರೂಜರ್ ನಡುವೆ ಡಿಕ್ಕಿಯಾಗಿ ಬೀದರ್ ಜಿಲ್ಲೆಯ ಲಾಡಿಗೇರ ಬಡಾವಣೆ ನಿವಾಸಿಗಳು ಐದು ಜನ ಸಾವನಪ್ಪಿದ್ದಾರೆ. ಸುನೀತಾ, ಸಂತೋಷ ಹಾಗೂ ನೀಲಮ್ಮ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಉಳಿದ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.