ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಪರಿಣಾಮ ಸದ್ಯ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಹತ್ತಿ ಉರಿಯುತ್ತಿರುವ ಘಟನೆ ವರದಿಯಾಗಿದೆ.
ಹೌದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಬಿದ್ದಿದ್ದು, ಚಾಮುಂಡಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬೇಸಿಗೆ ಆರಂಭವಾಗಿರುವುದರಿಂದ ಬೆಟ್ಟ ಒಣಗಿತ್ತು.ಕಿಡಿ ಗಿಡಿಗಳು ಬೆಂಕಿ ಹಾಕಿದ್ದರಿಂದ ಈಗ ಬೆಂಕಿ ಆವರಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಮುಂದಾಗಿದ್ದಾರೆ.








