ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಡರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ಹೌದು ಬೆಂಗಳೂರಲ್ಲಿ ನಾಲ್ವರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲದಲ್ಲಿ ತಡರಾತ್ರಿ ಅತ್ಯಾಚಾರ ನಡೆದಿದೆ.ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು ನಂತರ ಹಳೆ ಪರಿಚಯ ರೀತಿ ಮಾತನಾಡಿ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಊಟಕ್ಕೆ ಎಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.
ಬಳಿಕ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬೆಳಿಗ್ಗೆ 5 ಗಂಟೆಗೆ ಮೊಬೈಲ್ ಪರ್ಸ ಕಿತ್ತುಕೊಂಡು ಕಳಿಸಿದ್ದರು. ನಂತರ 112 ಗೆ ಫೋನ್ ಮಾಡಿ ಸಂತ್ರಸ್ತ ಮಹಿಳೆ ಮಾಹಿತಿ ನೀಡಿದಳು. ಸಾಮೂಹಿಕ ಅತ್ಯಾಚಾರ ಎಂದು ಕೋರಮಂಗಲ ಪೊಲೀಸರು ಇದೀಗ ದೂರು ದಾಖಲಿಸಿಕೊಂಡಿದ್ದಾರೆ.
ಘಟನೆ ಸಂಭಂದ ಮೂರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಗಾಳ ಹಾಗೂ ಉತ್ತರ ಪ್ರದೇಶದ ಮೂಲದ ಅಜಿತ್ ವಿಶ್ವಾಸ ಹಾಗೂ ಶಿವು ಎಂದು ತಿಳಿದುಬಂದಿದ್ದು, ಮತ್ತೊಬ್ಬ ಆರೋಪಿ ತಲೆಮರಿಸಿಕೊಂಡಿದ್ದು ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ವಶಕ್ಕೆ ಪಡೆದ ಆರೋಪಿಗಳು ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.