ಹಾವೇರಿ : ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ 35 ವರ್ಷದ ಯುವಕನೊಬ್ಬ ತನಗೆ ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬೇಸರದ ಘಟನೆ ನಡೆದಿದೆ. ಮೃತರನ್ನು ಗ್ರಾಮದ ಪ್ರಕಾಶ ಬಸವರಾಜ ಹೂಗಾರ (35) ಎಂದು ಗುರುತಿಸಲಾಗಿದೆ.
ಮೃತ ಯುವಕನಿಗೆ ಕಳೆದ ಕೆಲ ವರ್ಷಗಳಿಂದ ಮದುವೆಯಾಗಲು ಬೇರೆ ಬೇರೆ ಭಾಗಗಳಲ್ಲಿ ಹುಡುಗಿ ಹುಡುಕುತ್ತಿದ್ದರು. ಆದರೆ ಎಲ್ಲೂ ಕೂಡ ಹುಡುಗಿ ಸೆಟ್ ಆಗಿರಲಿಲ್ಲ. ಸುಮಾರು 10-12 ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಬಸವರಾಜ ಬಹಳ ಬೇಸತ್ತಿದ್ದರು. ಆದರೆ ಇಷ್ಟು ವರ್ಷವಾದರೂ ಹೆಣ್ಣು ಸಿಗಲಿಲ್ಲ ಅಂತ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.