ಬೆಂಗಳೂರು: ನಗರದ ಕೋರಮಂಗಲ ವ್ಯಾಪ್ತಿಯ ಹೋಟೆಲ್ ಮಹಡಿಯ ಮೇಲೆ ಮಹಿಳೆಯೊಬ್ಬರ ಮೇಲೆ ನಾಲ್ವರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವುದಾಗಿ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ನಾಲ್ವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ನಮಗೆ ಬೆಳಿಗ್ಗೆ 7 ರಿಂದ 8 ಗಂಟೆಯ ಹೊತ್ತಿಗೆ ಮಾಹಿತಿ ಸಿಕ್ಕಿತು. ಈಗಾಗಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದರು.
ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಫ್ರೆಂಡ್ಸ್ ಮಾತನಾಡಿಸಲು ಮಹಿಳೆ ತೆರಳಿದಾಗ ಈ ಕೃತ್ಯ ಎಸಗಲಾಗಿದೆ. ಎಲ್ಲರೂ ಉತ್ತರ ಭಾರತದವರು. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಂತ್ರಸ್ತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.
ಗುಜರಾತ್ ನಲ್ಲಿ ಟ್ರಕ್-ಬಸ್ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು, 23ಕ್ಕೂ ಹೆಚ್ಚು ಮಂದಿಗೆ ಗಾಯ
BIG NEWS: NPS ರದ್ದು, OPS ಜಾರಿಗೆ ಸಿಎಂ, ಡಿಸಿಎಂ ಸ್ಪಷ್ಟ ಸಂದೇಶ: ಸಿಎಸ್ ಷಡಕ್ಷರಿ