ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆಯಲ್ಲಿ ನಡೆಯುತ್ತಿರುವಂತ ಅಪರಾಧ ತಡೆಗಾಗಿ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಎಲ್ಲಾ ಹಂತದ ಪೊಲೀಸರಿಗೆ ರಾತ್ರಿ ಗಸ್ತು ಕಡ್ಡಾಯಗೊಳಿಸಲಾಗಿದೆ. ಜೊತೆಗೆ ನಾಕಾಬಂದಿ ನಡೆಸುವಂತೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಬಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂದಿ ಹಾಕುವುದಾಗಿ ತಿಳಿಸಿದರು.
ನಗರದಲ್ಲಿ ಪೊಲೀಸರ ರಾತ್ರಿ ಗಸ್ತು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಮಾಡಿ ಚರ್ಚಿಸಲಾಗಿದೆ ಎಂದರು.
ಬೆಂಗಳೂರಲ್ಲಿ ರಾತ್ರಿ ಗಸ್ತು, ಇ-ಬೀಟ್ ವ್ಯವಸ್ಥೆಯನ್ನು ಸುಧಾರಣೆಗೆ ತರುವ ನಿಟ್ಟಿನಲ್ಲಿ ಸಿಬ್ಬಂದಿಗೆ ವೀಡಿಯೋ ಕಾನ್ಫೆರೆನ್ಸ್ ಮುಖಾಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು.