ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವತಿ ಮೇಲೆ ಗೆಳೆಯನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಮೈಕ್ರೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವತಿ ಮೇಲೆ ಗೆಳೆಯನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ತನ್ನ ಗೆಳತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ನಗರದ ಕೋರಮಂಗಲ ವ್ಯಾಪ್ತಿಯ ಹೋಟೆಲ್ ಮಹಡಿಯ ಮೇಲೆ ಮಹಿಳೆಯೊಬ್ಬರ ಮೇಲೆ ನಾಲ್ವರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವುದಾಗಿ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ನಾಲ್ವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ನಮಗೆ ಬೆಳಿಗ್ಗೆ 7 ರಿಂದ 8 ಗಂಟೆಯ ಹೊತ್ತಿಗೆ ಮಾಹಿತಿ ಸಿಕ್ಕಿತು. ಈಗಾಗಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದರು.
ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಫ್ರೆಂಡ್ಸ್ ಮಾತನಾಡಿಸಲು ಮಹಿಳೆ ತೆರಳಿದಾಗ ಈ ಕೃತ್ಯ ಎಸಗಲಾಗಿದೆ. ಎಲ್ಲರೂ ಉತ್ತರ ಭಾರತದವರು. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಂತ್ರಸ್ತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.