ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಶುರುವಾದಂತೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2,000 ಕೋಟಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಾಗಿ ಆರೋಪಿಸಿ ಲೋಕಾಯುಕ್ತ, ಸಿಬಿಐ, ಇಡಿಗೆ ಶಾಸಕ ಮುನಿರತ್ನ ದೂರು ನೀಡಿದ್ದಾರೆ.
ಶಾಸಕ ಮುನಿರತ್ನ ಸಲ್ಲಿಸಿರುವಂತ ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಭ್ರಷ್ಟಾಚಾರ ಕುರಿತು ಈಗಾಗಲೇ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಬೆಂಗಳೂರು ನಗರಕ್ಕೆ ಎರಡು ಸಾವಿರ ಕೋಟಿ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ವಿಶ್ವಬ್ಯಾಂಕ್ ನಿಂದ ಸಾಲದ ರೂಪದಲ್ಲಿ 1700 ಕೋಟಿ ಪಡೆಯಲಾಗಿದೆ ಎಂದಿದ್ದಾರೆ.
ಇನ್ನೂ ಸಾರ್ವಜನಿಕರ ತೆರಿಗೆಯಿಂದ 300 ಕೋಟಿ ಅನುದಾನ ಸೇರಿದಂತೆ ಒಟ್ಟು 2000 ಕೋಟಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಹಣದಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ. ಕೂಡಲೇ ಈ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ ಕಾಂಗ್ರೆಸ್ ಶಾಸಕರಂತೆ ವರ್ತಿಸುತ್ತಿದ್ದಾರೆ. ಅವರ ಕ್ಷೇತ್ರಕ್ಕೆ ಬಿಬಿಎಂಪಿಯ ಕೇವಲ ಐದು ವಾರ್ಡ್ ಗಳಿದ್ದರೂ 232 ಕೋಟಿ ಹಂಚಿಕೆ ಮಾಡಲಾಗಿದೆ. ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದಂತ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಮಾಲೀಕತ್ವದ ಸ್ಟಾರ್ ಬಿಲ್ಡರ್ಸ್ ಕಂಪನಿಗೆ ಯಶವಂತಪುರ ಕ್ಷೇತ್ರಕ್ಕೆ ಹಂಚಿಕೆಯಾಗಿರುವ ಅನುದಾನದಲ್ಲಿ ನೀಡಲು ತೀರ್ಮಾನಿಸಲಾಗಿದೆ ಎಂಬುದಾಗಿಯೂ ಶಾಸಕ ಮುನಿರತ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಂಗನವಾಡಿ ಆಹಾರ ಅಕ್ರಮ ದಾಸ್ತಾನು: ಕಾಂಗ್ರೆಸ್ ಪಕ್ಷದಿಂದ ‘ಬತುಲ್ ಕಿಲ್ಲೇದಾ’ ಸಸ್ಪೆಂಡ್
‘NHM ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ವಿಮಾ ಯೋಜನೆಗೆ ಅಕ್ಸಿಸ್ ಬ್ಯಾಂಕ್ ಜೊತೆಗೆ ಒಪ್ಪಂದಕ್ಕೆ ಸಹಿ